ಮೈಸೂರು: ರಾಜ್ಯದ್ಯಂತ ಡೆಂಗ್ಯೂ ಜ್ವರ ಹೆಚ್ಚಲವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಮಂಡಿ ಮೊಹಲ್ಲಾದಲ್ಲಿರುವ ಮಾರುಕಟ್ಟೆ ಯಲ್ಲಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ಅಂಗಡಿ ಮಾಲೀಕರಿಗೆ ಕರಪತ್ರ ನೀಡಿ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳನ್ನು ಕುರಿತು ಮಾಹಿತಿ ನೀಡಲಾಯಿತು.
ಡೆಂಗ್ಯೂ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಭಯ ಬೇಡ ಜಾಗೃತಿ ಇರಲಿ, ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ನೀರು ನಿಲ್ಲದಂತೆ ಜಾಗೃತ ವಹಿಸಬೇಕು , ಸೊಳ್ಳೆಗಳಿಂದ ಹರಡುವ ಜ್ವರ ಇದಾಗಿರುವುದರಿಂದ, ಸೊಳ್ಳೆ ನಿಯಂತ್ರಣವೇ ಏಕೈಕ ಪರಿಹಾರ, ಇದಕ್ಕಾಗಿ ಪಾಲಿಕೆ ಫಾಗಿಂಗ್ ಮಾಡುತ್ತಿದ್ದು, ಸ್ವಚ್ಛತೆ ಕಾಪಾಡುವಲ್ಲಿ ನಮ್ಮ ಪೌರಕಾರ್ಮಿಕರು ಸಾಕಷ್ಟು ಶ್ರಮಪಡುತ್ತಿದ್ದಾರೆ. ಜೊತೆಗೆ ಸಾರ್ವಜನಿಕರು ಅವರ ಜೊತೆ ಕೈಜೋಡಿಸಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್ ಹೇಳಿದರು.
ನಂತರ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿದೆ. ಇದರಲ್ಲಿ ಡೆಂಗ್ಯೂ ಜ್ವರವು ಸಹ ಒಂದಾಗಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು, ಡೆಂಗ್ಯೂ ಜ್ವರ ನಿಯಂತ್ರಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಪ್ರತಿಯೊಬ್ಬರೂ ಈಡೀಸ್ ಲಾರ್ವ ಉತ್ಪತ್ತಿ ತಣಗಳನ್ನು ನಾಶಪಡಿಸಿ , ಡೆಂಗ್ಯೂ ಜ್ವರ ಹರಡದಂತೆ ಮುಂಜಾಗ್ರತೆ ವಹಿಸಬೇಕೆಂದು ಮನವಿ ಮಾಡಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಮಂಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ರಂಗಸ್ವಾಮಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೇಬಲ್ ವಿಜಿ, ಗಣೇಶ, ರಾಜು, ಸಂತೋಷ್, ಸದಾಶಿವ, ಸೂರಜ್, ಕಣ್ಣನ್, ರಶ್ಮಿ, ಪ್ರಭು, ಮಹಾಂತೇಶ್, ಹಾಗೂ ಇನ್ನಿತರರು ಹಾಜರಿದ್ದರು.