ಮನೆ ಉದ್ಯೋಗ ದಾವಣಗೆರೆ ಜಿಲ್ಲಾ ಪಂಚಾಯತ್​​ ನೇಮಕಾತಿ; ಪಿಯುಸಿ/ಲೈಬ್ರರಿ ಸೈನ್ಸ್​ ಆದವರಿಗೆ ಉದ್ಯೋಗಾವಕಾಶ

ದಾವಣಗೆರೆ ಜಿಲ್ಲಾ ಪಂಚಾಯತ್​​ ನೇಮಕಾತಿ; ಪಿಯುಸಿ/ಲೈಬ್ರರಿ ಸೈನ್ಸ್​ ಆದವರಿಗೆ ಉದ್ಯೋಗಾವಕಾಶ

0

ಬೆಂಗಳೂರು: ದಾವಣಗೆರೆ ಜಿಲ್ಲಾ ಪಂಚಾಯತ್​ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತ್​ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 16 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Join Our Whatsapp Group

ಹುದ್ದೆ ವಿವರ: ಜಿಲ್ಲೆಯ ತಾಲೂಕಿನಲ್ಲಿರುವ ಹುದ್ದೆಗಳ ವಿವರ

ಚನ್ನಗಿರಿ- 4

ದಾವಣಗೆರೆ – 8

ಹರಿಹರ- 4

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವೇತನ: ಮಾಸಿಕ 15,196 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸಿರುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಪ.ಜಾ, ಪ.ಪಂ ಮತ್ತು ಪ್ರವರ್ಗ ಅಭ್ಯರ್ಥಿಗಳಿಗೆ 200 ರೂ. ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗೆ ಜೂನ್​ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ davanagere.nic.inಗೆ ಭೇಟಿ ನೀಡಬಹುದು.