ಮೈಸೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರು. ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯವೇ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದರು.
ಸಿಬಿಐ ತನಿಖೆಗೆ ಒತ್ತಾಯ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರಿಗೆ 50:50 ಅನುಪಾತದಲ್ಲಿ ನಿವೇಶನ ಕೊಟ್ಟಿರುವುದು ತಪ್ಪಲ್ಲ. ಆದರೆ ಅಧಿಕಾರಿಗಳು ಸಮಾನಾಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕಿತ್ತು. ಡಿನೋಟಿಫೈ ಮಾಡಲು ಪ್ರಭಾವ, ಜಮೀನಿನ ಅಕ್ರಮ ನೋಂದಣಿ ವಿಚಾರ ನಿಜವೇ ಆಗಿದ್ದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಡಾದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.