ಮನೆ ಸ್ಥಳೀಯ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ: ಸಚಿವ ಕೆ ವೆಂಕಟೇಶ್

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ: ಸಚಿವ ಕೆ ವೆಂಕಟೇಶ್

0

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ನಿಯಮಾನುಸಾರ ಬದಲಿ ನಿವೇಶನ ನೀಡಲಾಗಿದೆ. ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.

Join Our Whatsapp Group

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಮುಡಾ ಕಚೇರಿ ಬಳಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಈ ವೇಳೆ ಅವರು ಮಾತನಾಡಿದರು.

ವಿನಾ ಕಾರಣ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ಬಿಜೆಪಿ ಮಾಡುತ್ತಿರುವ ಆರೋಪಗಳು ಸಂಪೂರ್ಣ ‌ನಿರಾಧಾರ ಎಂದು ವೆಂಕಟೇಶ್ ಹೇಳಿದರು.

ಪೊಲೀಸ್ ಬಿಗಿ ಭದ್ರತೆ

ಮೈಸೂರು ಮುಡಾ‌ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ವಿಪಕ್ಷ ಹಾಗೂ ಆಡಳಿತ ಪಕ್ಷದ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಮುಡಾ ಕಚೇರಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.

ಮುಡಾ ಕಚೇರಿ ಸುತ್ತಮುತ್ತ ಬ್ಯಾರೀಕೇಡ್ ಅಳವಡಿಸಲಾಗಿದ್ದು, ಮುಡಾ ಸುತ್ತಮುತ್ತಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. 10 ಕೆಎಸ್‌ಆರ್‌ಪಿ ತುಕಡಿ ಸೇರು 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ.

ಮುಡಾ ಭ್ರಷ್ಟಾಚಾರ ಪ್ರಕರಣವನ್ನ ಸಿಬಿಐಗೆ ಒತ್ತಾಯಿಸಿ ಬಿಜೆಪಿಯಿಂದ ಮುಡಾ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಹಾರಾಜ ಕಾಲೇಜು ಮೈದಾನದಿಂದ ಮುಡಾಗೆ ಪ್ರತಿಭಟನೆಗೆ ತೆರಳಲಿದೆ. ಬಿಜೆಪಿ ಪ್ರತಿಭಟನೆ ಖಂಡಿಸಿ ಸರ್ಕಾರದ ಪರ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.