ಮನೆ ರಾಜ್ಯ ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ

ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ

0

ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.

Join Our Whatsapp Group

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ ,  ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು  ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ…

ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.

ಹುಬ್ಬಳ್ಳಿ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟ ಸಿಎಂ

ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ.‌ ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.

ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು.