ಮನೆ ರಾಜ್ಯ ಒಂದು ಅಥವಾ ಎರಡನೇ ತರಗತಿಯಲ್ಲಿ ನೈತಿಕ ಶಿಕ್ಷಣ ಪಠ್ಯ ಅಳವಡಿಕೆಗೆ ಕ್ರಮ: ಸಚಿವ ಬಿ.ಸಿ....

ಒಂದು ಅಥವಾ ಎರಡನೇ ತರಗತಿಯಲ್ಲಿ ನೈತಿಕ ಶಿಕ್ಷಣ ಪಠ್ಯ ಅಳವಡಿಕೆಗೆ ಕ್ರಮ: ಸಚಿವ ಬಿ.ಸಿ. ನಾಗೇಶ್

0

ಬೆಂಗಳೂರು (Bengaluru)- ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಚಾಮರಾಜಪೇಟೆಯ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರರತ್ನ ಸುರಿಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡದಾದ ಒಂದೇ ಬಾರಿಗೆ 11 ಮಂದಿ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತರುತ್ತಿದ್ದು, ರಾಷ್ಟ್ರೀಯವಾದಿ ಸಮಾಜ ನಿರ್ಮಿಸಲು ಪ್ರತಿಯೊಬ್ಬರಿಗೂ ದೇಶ ಪ್ರೇಮ ಮೂಡಿಸುವ ಶಿಕ್ಷಣದ ಅಗತ್ಯವಾಗಿದೆ. ನಾವು ಬ್ರಿಟಿಷ್ ಮಾದರಿಯ ಶಿಕ್ಷಣ ವ್ಯವಸ್ಥೆಯಿಂದ ಇನ್ನೂ ಮುಕ್ತವಾಗಿಲ್ಲ. ಹೀಗಾಗಿ ಒಂದು ಅಥವಾ ಎರಡನೇ ತರಗತಿಯಲ್ಲಿ ನೈತಿಕ ಶಿಕ್ಷಣದ ಪಾಠಗಳನ್ನು ಅಳವಡಿಸುತ್ತೇವೆ. ಹೀಗಾಗಿ ರಾಷ್ಟ್ರೀಯ ವಾದಿ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಶಿಕ್ಷಣ ವ್ಯವಸ್ಥೆಯನ್ನು ಬದಲಾವಣೆ ಮಾಡದಿದ್ದರೆ ಜನ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಪಾದನೆಯಾಗಿದ್ದು, ಇದೇ ಹಾದಿಯಲ್ಲಿ ರಾಜ್ಯ ಸರ್ಕಾರ ಮುನ್ನಡೆಯುತ್ತಿದೆ. ನಮಗೆ ದೇಶದಲ್ಲಿ ಔಪಚಾರಿಕ ಶಿಕ್ಷಣ ಬಹಳಷ್ಟು ಕಡೆಗಳಲ್ಲಿ ಸಿಗುತ್ತದೆ. ತಾಯಿ, ನಂತರ ಗುರುಗಳಿಂದಲೂ ಶಿಕ್ಷಣ ದೊರೆಯುತ್ತಿದೆ. ಆದರೆ ನೈತಿಕ ಶಿಕ್ಷಣ ಮತ್ತು ರಾಷ್ಟ್ರೀಯವಾದಿ ಶಿಕ್ಷಣ ದೊರೆಯುವುದಿಲ್ಲ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಧಾರ್ಮಿಕ ಸಮುದಾಯ ಒಳಗೊಂಡಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ದೇಶದಲ್ಲಿ ಹಲವಾರು ಸಮಸ್ಯೆಗಳಿದ್ದು, ಇವೆಲ್ಲವುಗಳಿಗೂ ಪರಿಹಾರಗಳಿವೆ. ಜೈನ ಧರ್ಮ ಹಾಗೂ ಪ್ರಧಾನಮಂತ್ರಿ ನರೇಂದ್ರ ಮಫೋದಿ ಅವರು ಸ್ವಾವಲಂಬಿ ಭಾರತದ ಚಿಂತನೆಗಳನ್ನು ನೀಡಿದ್ದಾರೆ. ಇಂತಹ ಚಿಂತನೆಗಳನ್ನು ಸಾಕಾರಗೊಳಿಸಲು ಧಾರ್ಮಿಕ ವರ್ಗ ಕೈಜೋಡಿಸಬೇಕು ಎಂದರು.