ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.
ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಆಕೆಯ ಸ್ಥಿತಿ ಗಂಭೀರವಾದುದನ್ನು ನೋಡಿದ ವೈದ್ಯರು ಆಕೆಯನ್ನು ಅಲಿಗಢಕ್ಕೆ ಕಳುಹಿಸಿದ್ದರು, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.
ಅವರಿಗೆ ಶೇ.80ರಷ್ಟು ಭಾಗ ಸುಟ್ಟು ಹೋಗಿತ್ತು. ಪೊಲೀಸರು ಮಗನನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಹತ್ಯೆ ಮಾಡಿದ್ದಾನೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಿಳೆ ತನ್ನ ಮಗನೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದ್ದು ಪೊಲೀಸರ ಜತೆ ಮಾತುಕತೆ ನಡೆಸಿದ್ದನ್ನು ಕಾಣಬಹುದು. ಮಹಿಳೆಯೇ ಮೊದಲು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು, ಪೊಲೀಸರು ಲೈಟರ್ ಕಿತ್ತುಕೊಳ್ಳಲು ಹೋದಾಗ ಅದು ಕೆಳಗೆ ಬಿದ್ದಿತ್ತು, ಆಗ ಅದನ್ನು ತೆಗೆದುಕೊಂಡ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ.
ಮಹಿಳೆಯ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು, ಇದನ್ನು ಬಗೆಹರಿಸಿಕೊಡಿ ಎಂದು ಕೇಳಲು ಪೊಲೀಸ್ ಠಾಣೆಗೆ ಹೋಗಿದ್ದರು, ತಾವು ಹೋದ ಕೆಲಸ ಆಗದಿದ್ದಾಗ ಮಹಿಳೆ ಪೆಟ್ರೋಲ್ ಸುರಿದುಕೊಂಡು ಹೆದರಿಸಲು ಶುರು ಮಾಡಿದ್ದರು ಇದೇ ಸಮಯದಲ್ಲಿ ಅವರ ಮಗ ಬೆಂಕಿ ಹಚ್ಚಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ ಮಗನನ್ನು ಬಂಧಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.