ಮನೆ ಅಪರಾಧ ಹಾಸನ: ಅಪರಿಚಿತ ವಾಹನ ಡಿಕ್ಕಿ; ಜಿಂಕೆ ಸಾವು

ಹಾಸನ: ಅಪರಿಚಿತ ವಾಹನ ಡಿಕ್ಕಿ; ಜಿಂಕೆ ಸಾವು

0

ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟ ಘಟನೆ  ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಹಳೆಹೊಂಕರವಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜು.17ರ ಬುಧವಾರ ಸಂಭವಿಸಿದೆ.

Join Our Whatsapp Group

ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದಿದ್ದರಿಂದ ಜಿಂಕೆ ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು,ಪರಿಶೀಲಿಸಿದ ನಂತರ ಜಿಂಕೆ ಶವವನ್ನು ವಶಕ್ಕೆ ಪಡೆದು ಪಶು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.