ಯಾವುದೇ ಹಾನಿಯಾಗದಂತೆ ಮುಂಜಾಗೃತವಾಗಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ
ಮೈಸೂರು:ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ‘ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.