ಹಾಸನ: ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಗರ್ಭಿಣಿಯೊಬ್ಬರು ಗಾಯಗೊಂಡಿದ್ದಾರೆ. ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ತಾಹೀರಾ ಅವರು ಮನೆಯ ಮುಂದೆ ಕೆಲಸ ಮಾಡುತ್ತಿದ್ದ ವೇಳೆ, ಮನೆಯ ಗೋಡೆ ಕುಸಿದು ಬಿದ್ದಿದೆ. ತಾಹೀರಾ ಅವರ ಕಾಲಿಗೆ ಬಲವಾದ ಪೆಟ್ಟಾಗಿದ್ದು, ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.
ಹಳ್ಳಕ್ಕೆ ಇಳಿದ ಬಸ್:
ಆಲೂರು ತಾಲ್ಲೂಕಿನ ಮಣಿಗನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಇಳಿದಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಆಲೂರಿನಿಂದ ಪುರಭೈರವನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಬಸ್, ಮಳೆಯಿಂದ ನಿಯಂತ್ರಣಕ್ಕೆ ಸಿಗದೇ ಹಳ್ಳಕ್ಕೆ ಇಳಿದಿದೆ.