ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ನ್ಯಾಯಾಂಗ ಬಂಧನವನ್ನು ಇಂದು (ಜುಲೈ 18) ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.
ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ.
ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.