ಗಾಜಿಯಾಬಾದ್ ನ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್ನಲ್ಲಿ ಬಂಧಿಯಾಗಿರಿಸಿ 12 ದಿನಗಳ ಕಾಲ ಸಾಮೂಹಿತ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್ ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾ ನ ಭೋಜ್ ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ.
ಗಾಜಿಯಾಬಾದ್ ಹಾಗೂ ಮೀರತ್ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಕುಟುಂಬದವರು ಎಸ್ ಎಸ್ ಪಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.
ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.
ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
ಇಬ್ಬರೂ ಆರೋಪಿಗಳು ವಿದ್ಯಾರ್ಥಿನಿಯನ್ನು ಜಮ್ಮುವಿಗೆ ಕರೆದೊಯ್ದು ಆರು ದಿನಗಳ ಕಾಲ ಅಲ್ಲಿನ ಹೋಟೆಲ್ ನಲ್ಲಿ ಒತ್ತೆಯಾಳಾಗಿ ಇರಿಸಿದ್ದರು. ಇಲ್ಲಿ ನಾಲ್ವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.