ಮನೆ ರಾಜಕೀಯ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

0

ನವದೆಹಲಿ: ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

Join Our Whatsapp Group

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸೋಮವಾರ ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಉನ್ನತ ಸಾಧನೆ ಮಾಡಿದೆ. ಐಟಿ, ಬಿಟಿ ಕ್ಷೇತ್ರಗಳಲ್ಲಂತೂ ಜಗತ್ತಿನ ಗಮನ ಸೆಳೆದಿದೆ. ಈ ನಡುವೆ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಹಲವು ಆಡಳಿತಾತ್ಮಕ ಸಮಸ್ಯೆಗಳು ನಿರ್ಮಾಣವಾಗಿವೆ. ಅಭಿವೃದ್ಧಿ ನಿರ್ಲಕ್ಷ್ಯದ ಜತೆಗೆ ಹಲವು ಸಮಸ್ಯೆಗಳು ಇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆಗಿದೆ’ ಎಂದರು.

ಈ ನಿಗಮದ ಖಜಾನೆಯ ಮೂಲಕವೇ ₹187 ಕೋಟಿಯು ಬೇನಾಮಿ ಖಾತೆಗಳಿಗೆ ಜಮಾ ಆಗಿದೆ. ಇದು ಜನರ ತೆರಿಗೆ ಹಣ. ಈ ಹಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಿತ್ತು. ಅದರ ಬದಲು ಬೇನಾಮಿ ಖಾತೆಗಳಿಗೆ ವರ್ಗಾವಣೆಯಾಗಿ ದುರುಪಯೋಗ ಆಗಿದೆ. ಇದನ್ನು ಸರ್ಕಾರ ಸಹ ಒಪ್ಪಿದೆ. ಮುಖ್ಯಮಂತ್ರಿಯವರ ಬಳಿಯೇ ಹಣಕಾಸು ಖಾತೆಯೂ ಇದೆ. ಆಡಳಿತ ವ್ಯವಸ್ಥೆಯ ದುರುಪಯೋಗದ ಬಗ್ಗೆ ಕ್ರಮ ಆಗಬೇಕು ಎಂದು ಅವರು ಆಗ್ರಹಿಸಿದರು.