ಮನೆ ರಾಜ್ಯ ಐಟಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್: ಇನ್ಮುಂದೆ 14 ಗಂಟೆ ಕೆಲಸ

ಐಟಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್: ಇನ್ಮುಂದೆ 14 ಗಂಟೆ ಕೆಲಸ

0

ಬೆಂಗಳೂರು: ಕರ್ನಾಟಕದ ಐಟಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್ ಕಾದಿದೆ. ಇನ್ಮುಂದೆ 9 ಗಂಟೆಯಲ್ಲ. ಸರ್ಕಾರ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ಬಂದರೆ 14 ಗಂಟೆ ಕೆಲಸ ಮಾಡಬೇಕಾಗಬಹುದು.

Join Our Whatsapp Group

ಬುಧವಾರ ಐಟಿ ಉದ್ಯೋಗಿಗಳ ಸಭೆ ಕರೆದಿದ್ದು, ಕಾಯ್ದೆ ಜಾರಿಯಾದರೆ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

ಕರ್ನಾಟಕ ಶಾಪ್ಸ್ ಕಮರ್ಷಿಯಲ್ ಎಸ್ಟಾಬ್ಲಿಶ್ಮೆಂಟ್ 2024 ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೆ ತರಲು ಸರ್ಕಾರದ ಮೇಲೆ ಕಂಪನಿಗಳು ಒತ್ತಡ ಹೇರುತ್ತಿವೆ. ಕಾರ್ಮಿಕ ಇಲಾಖೆಯೂ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದ್ದು, ಐಟಿ ಕಾರ್ಮಿಕರ ಅಸೋಸಿಯೇಷನ್ ಜೊತೆ ಸಭೆ ನಡೆಸಿದೆ.

ಈ ಪ್ರಸ್ತಾವನೆಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ ಉಂಟಾಗುತ್ತದೆ. ಜೊತೆಗೆ ಅದೇ ಸಂಬಳಕ್ಕೆ ಹೆಚ್ಚು ಸಮಯ ದುಡಿಯಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.