ಮನೆ ದೇಶ ವಿಶ್ವ ಯೋಗ ದಿನಾಚರಣೆ: ಪ್ರಧಾನಿ ಮೋದಿ ಆಗಮನ ಬಹುತೇಕ ಖಚಿತ – ಎಸ್.ಟಿ.ಸೋಮಶೇಖರ್

ವಿಶ್ವ ಯೋಗ ದಿನಾಚರಣೆ: ಪ್ರಧಾನಿ ಮೋದಿ ಆಗಮನ ಬಹುತೇಕ ಖಚಿತ – ಎಸ್.ಟಿ.ಸೋಮಶೇಖರ್

0

ಮೈಸೂರು(Mysuru): ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗ ದಿನಾಚರಣೆಗಾಗಿ ಸ್ಥಳ ನಿರ್ಧಾರ ಇನ್ನೂ ಆಗಿಲ್ಲ. ರೇಸ್‌ಕೋರ್ಸ್‌, ಅರಮನೆ ಆವರಣ ಸೇರಿದಂತೆ ನಗರದಲ್ಲಿರುವ ಹಲವು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದ್ದು, ಕೇಂದ್ರ ತಂಡವು ಸದ್ಯದಲ್ಲೇ ಅಂತಿಮಗೊಳಿಸಲಿದೆ ಎಂದು ಹೇಳಿದರು.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸಲಾಗುವುದು. ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಈ ಸಮಿತಿಯಲ್ಲಿ ವಿವಿಧ ಯೋಗತರಬೇತಿ ಕೇಂದ್ರಗಳ ಮುಖ್ಯಸ್ಥರೂ ಸದಸ್ಯರಾಗಿರುತ್ತಾರೆ. ಒಟ್ಟಾರೆ, ಕಾರ್ಯಕ್ರಮದ ಕುರಿತು ಇಲ್ಲಿ ನಿರ್ಧರಿಸಲಾಗುವುದು ಎಂದರು.

ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಮೇ 30ರಂದು ನಗರಕ್ಕೆ ಬರಲಿದ್ದಾರೆ. ಇದಕ್ಕೂ ಮುನ್ನ ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಯೋಗ ದಿನಾಚರಣೆಯಲ್ಲಿ ಕೇವಲ ಮೈಸೂರಿಗರಿಗಷ್ಟೇ ಅವಕಾಶ ನೀಡದೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಯೋಗಪಟುಗಳು ಭಾಗವಹಿಸಲೂ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.