ಮನೆ ಅಪರಾಧ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

0

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಕಸ್ಟಮ್ಸ್​ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ.

Join Our Whatsapp Group

ಚಿನ್ನ ಸಾಗಿಸುತ್ತಿದ್ದದ್ದ ಮುರ್ತಾಜಿಮ್, ಶೇಖ್ ಮೊಹಮ್ಮದ್ ಇಮ್ರಾನ್ ಎಂಬವರನ್ನು​​​ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ದುಬೈನಿಂದ ಬೆಂಗಳೂರಿಗೆ EK 564 ವಿಮಾನದಲ್ಲಿ ಬಂದಿದ್ದರು.

ಆರೋಪಿಗಳು ವಿದೇಶದಿಂದ ಬಟ್ಟೆಗಳಲ್ಲಿ ಮರೆಮಾಚಿ ಚಿನ್ನ ತಂದಿದ್ದರು. ಸದ್ಯ ಇಬ್ಬರನ್ನೂ ಕಸ್ಟಮ್ಸ್​ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ದುಬೈಯಿಂದ ಬಂದ ವ್ಯಕ್ತಿಯೊಬ್ಬರ ಬ್ಯಾಗ್​​ನಲ್ಲಿ ಬರೋಬ್ಬರಿ 40 ಐಫೋನ್ ಹಾಗೂ 5 ಆ್ಯಪಲ್ ವಾಚ್​ಗಳು ಕಂಡುಬಂದು ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಬುಧವಾರವಷ್ಟೇ ವರದಿಯಾಗಿತ್ತು. ಇದೀಗ ಅದರ ಬೆನ್ನಲ್ಲೇ 1.68 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.