ಮನೆ ರಾಷ್ಟ್ರೀಯ ಹೃದಯಾಘಾತವಾದರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ

ಹೃದಯಾಘಾತವಾದರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ

0

ತಮಿಳುನಾಡು: ಬಸ್ ಚಾಲನೆಯಲ್ಲಿರುವಾಗ ಹೃದಯಾಘಾತಗೊಂಡರೂ ಬಸ್ಸಿನಲ್ಲಿದ್ದ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಶಾಲಾ ಬಸ್ ಚಾಲಕರೋರ್ವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಗುರುವಾರ ಸಂಜೆ ನಡೆದಿದೆ.

Join Our Whatsapp Group

ಏನಿದು ಘಟನೆ:

ಮಲಯಪ್ಪನ್ ಅವರು ವೆಲ್ಲಕೋಯಿಲ್‌ ನಲ್ಲಿರುವ ಖಾಸಗಿ ಶಾಲೆಯ ಬಸ್ಸಿನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಅದರಂತೆ ಗುರುವಾರ ಸಂಜೆ ಮಕ್ಕಳನ್ನು ಮನೆಗೆ ಬಿಡಲು ಹೊರಟಿದ್ದಾರೆ.

ಈ ವೇಳೆ ಬಸ್ಸು ವೆಳ್ಳಕೋಯಿಲ್-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ಚಾಲಕನಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಎಚ್ಚೆತ್ತ ಚಾಲಕ ಮಲಯಪ್ಪನ್ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಬಳಿಕ ಬಸ್ಸಿನ ಸೀಟ್ ನಲ್ಲಿ ಕುಳಿತಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಆ ಬಳಿಕ ಅಲ್ಲಿನ ಸ್ಥಳೀಯರು ಬಸ್ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಯಾವುದೇ ಪ್ರಾಯೋಜನವಾಗಲಿಲ್ಲ, ಪರಿಶೀಲಿಸಿದ ವೈದ್ಯರು ಮಲಯಪ್ಪನ್ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಸಾವಿನ ದವಡೆಯಲ್ಲೂ ಮಲಯಪ್ಪನ್ ಅವರು ಶಾಲಾ ಬಸ್ಸಿನಲ್ಲಿದ್ದ ಮಕ್ಕಳ ಜೀವ ಉಳಿಸುವಲ್ಲಿ ಸಮಯ ಪ್ರಜ್ಞೆ ಮೆರೆದಿರುವುದಕ್ಕೆ ಸಾರ್ವಜನಿಕರು ಸೇರಿದಂತೆ ಮಕ್ಕಳ ಪೋಷಕರು ಶ್ಲಾಘಿಸಿದ್ದಾರೆ, ಅಷ್ಟು ಮಾತ್ರವಲ್ಲದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಅಗಲಿದ ಮಲಯಪ್ಪನ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಸಾವಿನ ಕೊನೆ ಕ್ಷಣದಲ್ಲೂ ಮಕ್ಕಳ ಬಗ್ಗೆ ಆಲೋಚಿಸಿ ಅವರ ರಕ್ಷಣೆ ಮಾಡಿದ ಮಲಯಪ್ಪನ್ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.