ಬೆಂಗಳೂರು: 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ನಿರ್ಧಾರ ಮಾಡಲಾಗಿದೆ.
ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲಾಗುವುದು ಎಂದು ಇಂದು (ಶುಕ್ರವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಇನ್ನು ಕರ್ನಾಟಕದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.