ಚಿಕ್ಕಬಳ್ಳಾಪುರ: ‘ಸುಪ್ರಿಂಕೋರ್ಟ್ ಆದೇಶದನ್ವಯ ಶೀಘ್ರವೇ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸುತ್ತೇವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ.ಸುಧಾಕರ್ ಹೇಳಿದರು.
ನೀಟ್ ಪರೀಕ್ಷೆ ಹಾಗೂ ಫಲಿತಾಂಶ ಗೊಂದಲ ಹಿನ್ನಲೆ ರಾಜ್ಯದ ಸಿಇಟಿ ಮ್ಯಾಟ್ರಿಕ್ಸ್ ಮೇಲೆ ಕರಾಳ ಛಾಯೆ ಬೀರಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ‘ ಈಗಾಗಲೇ ಕಾಲೇಜು ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. 2024-25ರ ಶೈಕ್ಷಣಿಕ ಸಾಲಿಗೆ ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳುತ್ತೆವೆ ಎಂದಿದ್ದಾರೆ.
ನೀಟ್- ಯುಜಿ ಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ
ವಿವಾದಕ್ಕೆ ಸಿಲುಕಿರುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ(ಜು.21) ಪ್ರಕಟಿಸಲಾಗಿತ್ತು. ಇನ್ನು 2024ರ ನೀಟ್- ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ(ಜು.23) ಹೇಳಿತ್ತು. ಎರಡು ಸ್ಥಳೀಯ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳ ನಂತರ ಪರೀಕ್ಷೆಯ “ವ್ಯವಸ್ಥಿತ ಉಲ್ಲಂಘನೆ” ಅನ್ನು ಸೂಚಿಸುವ ಯಾವುದೇ ಡೇಟಾ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಮರು-ಪರೀಕ್ಷೆಯನ್ನು ನಡೆಸುವ ಆದೇಶವು 23.33 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವೃತ್ತಿಪರರ ಮೇಲೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಹೇಳಿದ್ದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್ಟಿಎ ನಗರವಾರು ಮತ್ತು ಪರೀಕ್ಷಾ ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸಿದ್ದು, ದೇಶಾದ್ಯಂತ ವಿವಿಧ ನಗರಗಳಲ್ಲಿನ 4,750 ಸೆಂಟರ್ಗಳಲ್ಲಿ 32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಆದರೆ, ಈ ಬಾರಿ ಪೇಪರ್ ಲೀಕ್ ಸೇರಿದಂತೆ ಅಕ್ರಮ ನಡೆಸಲಾಗಿತ್ತು ಎಂದು ಆರೋಪಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ರಿಸಲ್ಟ್ ಕಳಪೆಯಾಗಿ ಬಂದಿದೆ. ಕೆಲ ಸೆಂಟರ್ಗಳಲ್ಲಿ ಬಹಳ ಉತ್ತಮ ಎನಿಸುವ ರಿಸಲ್ಟ್ ಬಂದಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.