ಮನೆ ಅಪರಾಧ ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು

0

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್​ ಬಳಿ ನಡೆಯಿತು.

Join Our Whatsapp Group

ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ‌ (27) ಎಂದು ಗುರುತಿಸಲಾಗಿದೆ.

ಐಟಿಪಿಎಲ್​​ ನ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಹಾಗೂ ಶಿಲ್ಪಾ ನಿನ್ನೆ ಊಟಕ್ಕೆಂದು ಹೊರಗಡೆ ಬಂದಿದ್ದಾಗ ಅವಘಡ ಸಂಭವಿಸಿದೆ.

ರಾತ್ರಿ 8:45ರ ಸುಮಾರಿಗೆ ಮೆಜೆಸ್ಟಿಕ್‌ನಿಂದ‌ ಕೆ.ಆರ್.ವೃತ್ತದ ಕಡೆ ಬರುತ್ತಿದ್ದಾಗ ವೇಗವಾಗಿ ಸಿಐಡಿ ಜಂಕ್ಷನ್‌ನಿಂದ ಸಂಪರ್ಕ ಕಲ್ಪಿಸುವ ರಸ್ತೆಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಇಬ್ಬರ ಮೇಲೆಯೂ ಹರಿದಿದೆ. ಗಾಯಾಳುಗಳನ್ನು ಸಮೀಪದ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆಯೇ ಇಬ್ಬರೂ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.