ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ನಡೆದಿದೆ.
ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯ ಎದೆಗೆ ಡ್ರಾಗರ್ ನಿಂದ ಚುಚ್ಚಿ ಕೊಲೆ ಮಾಡಿಸಿ ಬಳಿಕ ಅಪಘಾತವೆಂದು ನಾಟಕವಾಡಿದ್ದಾಳೆ.
ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ ಕೊಲೆ ಮಾಡಿಸಿದ ಮಹಿಳೆ. ಸದ್ಯ ಘಟನೆ ಸಂಬಂಧ ಹರ್ಷಿತಾಳನ್ನು ಬಂಧಿಸಲಾಗಿದ್ದು ಆಕೆಯ ಸಹೋದರ, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ನಿವಾಸಿಯಾಗಿರುವ ಹರ್ಷಿತಾ ಹಾಗೂ ಕಲಬುರ್ಗಿ ಜಿಲ್ಲೆಯ ನಿವಾಸಿಯಾಗಿರುವ ಪ್ರಕಾಶ್ ಪರಸ್ಪರ ಪ್ರೀತಿಸಿ ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಮುದ್ದಾದ ಹೆಣ್ಣು ಮಗು ಕೂಡ ಇದೆ. ಪ್ರಕಾಶ್ ಪೋಸ್ಟ್ ಆಫೀಸ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಿ ಮಗು ಇದ್ದರೂ ಹರ್ಷಿತಾಗೆ ಅಕ್ರಮ ಸಂಬಂಧವಿತ್ತು. ತನ್ನ ಕುಟುಂಬದ ಓರ್ವನ ಜೊತೆ ಸಂಬಂಧ ಹೊಂದಿದ್ದಳು. ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡ ಆಗಬಹುದು ಎಂಬ ಕಾರಣಕ್ಕೆ ಹರ್ಷಿತಾ ತನ್ನ ಸಹೋದರ ಹಾಗೂ ಪ್ರಿಯತಮನ ಜೊತೆ ಸೇರಿಕೊಂಡು ಪತಿಯ ಕೊಲೆ ಮಾಡಿಸಿದ್ದಾಳೆ. ಬಳಿಕ ಆಕ್ಸಿಡೆಂಟ್ ಎಂದು ಬಿಂಬಿಸಲು ಮುಂದಾಗಿದ್ದಾಳೆ.
ಪ್ರಕಾಶ್ ಎದೆ ಭಾಗಕ್ಕೆ ಡ್ರಾಗರ್ನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಇದರಿಂದಾಗಿ ಇದೊಂದು ಕೊಲೆ ಎಂದು ಸುಲಭವಾಗಿ ತಿಳಿದು ಬಂದಿದ್ದು ಸದ್ಯ ಕೊರಟಗೆರೆ ಪೊಲೀಸರು ಹರ್ಷಿತಾಳನ್ನು ಬಂಧಿಸಿದ್ದಾರೆ. ಹರ್ಷಿತಾ ಸಹೋದರ ಮತ್ತು ಪ್ರಿಯತಮನಿಗಾಗಿ ಹುಡುಕಾಟ ನಡೆಯುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.