ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.
ವಾಹನ ಸಂಚಾರ ಸಂಪೂರ್ಣ ಬಂದ್
ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.