ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ನಂಜನಗೂಡು ತಾಲೂಕಿನ ವರುಣಾ ಕ್ಷೇತ್ರದ ಬೊಕ್ಕ ಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಹ ಇಳಿಮುಖವರೆಗೆ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓ ಅವರು ಸಂತ್ರಸ್ತರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಂಜನಗೂಡು ತಹಶೀಲ್ದಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.