ಬೆಂಗಳೂರು: ಬೆಂಗಳೂರಿನಲ್ಲಿ ಅಪಾಯಕಾರಿ ಚಾಲನೆಗೆ ಕಡಿವಾಣ ಹಾಕುವುದಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು ಜೂನ್ ಅಂತ್ಯದವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 6,283 ಪ್ರಕರಣ ಮತ್ತು ವ್ಹೀಲಿಂಗ್ ಸಂಬಂಧ 225 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ ನಗರದಲ್ಲಿ 216 ವ್ಹೀಲಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಜೂನ್ನಲ್ಲಾಗಲೇ ಅದನ್ನು ಮೀರಿ ಪ್ರಕರಣಗಳು ದಾಖಲಾಗಿವೆ. ಟ್ರಾಫಿಕ್ ಪೊಲೀಸರು 93 ಸವಾರರ ನೋಂದಣಿ ಪ್ರಮಾಣಪತ್ರಗಳನ್ನು (ಆರ್‌ಸಿ) ಅಮಾನತಿಗಾಗಿ ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಿದ್ದು, ಅದರಲ್ಲಿ 26 ಆರ್‌ಸಿಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
ವ್ಹೀಲಿಂಗ್ ನಡೆಸಿದ ಒಂಬತ್ತು ಚಾಲಕರ ಚಾಲನಾ ಪರವಾನಗಿಯನ್ನು (ಡಿಎಲ್) ಸಹ ಅಮಾನತುಗೊಳಿಸಲಾಗಿದೆ.
2023ರಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದೆ 7,053 ಪ್ರಕರಣಗಳು ದಾಖಲಾಗಿದ್ದವು. ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಗಳಿಂದಾಗಿ ಈ ವರ್ಷದ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಹೇಳಿದ್ದಾರೆ.
ಪೊಲೀಸರು 1,263 ಡ್ರೈವಿಂಗ್ ಲೈಸೆನ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಮದ್ಯಪಾನ ಮಾಡಿ ಚಾಲನೆ ಪ್ರಕರಣಗಳಲ್ಲಿ ಅಮಾನತುಗೊಳಿಸಲು ಐದು ಆರ್‌ಸಿಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.