ಬೆಂಗಳೂರು: ನಟ ಸಂಚಾರಿ ವಿಜಯ್, ಡಾ.ಪುನೀತ್ ರಾಜ್ಕುಮಾರ್ ಅವರ ನಿಧನದ ಬಳಿಕ ರಾಜ್ಯದಲ್ಲಿ ಕಣ್ಣು ದಾನ, ಅಂಗಾಂಗ ದಾನದ ಬಗ್ಗೆ ಜನರು ಜಾಗೃತರಾದರು. ಇದೀಗ ರಾಜ್ಯದಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಈಗ ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ಅಂಗಾಂಗ ದಾನ ಮಾಡುವಲ್ಲಿ 2ನೇ ಸ್ಥಾನ ಪಡೆದಿದೆ.
2023ರಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿದ್ದು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿತ್ತು. ರಾಜ್ಯದಲ್ಲಿ 178 ಜನ ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆ ಅತಿ ಹೆಚ್ಚು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲೆಯಾಗಿದೆ.
ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆದಿದೆ. ‘ಆಯುಷ್ಮಾನ್ ಭವ’ ಆರೋಗ್ಯ ಮೇಳದಲ್ಲಿ ಅಂಗಾಂಗ ದಾನದ ಪ್ರತಿಜ್ಞೆ ಪಡೆಯುವಲ್ಲಿ ಕರ್ನಾಟಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಅಂಗಾಂಗ ದಾನವನ್ನು ಮತ್ತಷ್ಟು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರನ್ನು ಗೌರವಿಸಲು ಆದೇಶ ಹೊರಡಿಸಿದೆ. ಜೊತೆಗೆ ಹೊಸ ನಿರ್ದೇಶನದ ಪ್ರಕಾರ, ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ಮುಂದಾಗಿದೆ.
ಇನ್ನು ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನ ಮಾಡಿದವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.