ಮನೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ನ್ಯಾಯಾಲಯ ಗುರುವಾರ(ಆ.1ರಂದು) ಆದೇಶಿಸಿದೆ.

Join Our Whatsapp Group

ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಈ ಸಂಬಂಧ ಪೊಲೀಸರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯ ವಿಸ್ತರಣೆಯನ್ನು ಕೋರಿ ನ್ಯಾಯಾಧೀಶರ ಮುಂದೆ  ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು. ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಣೆ ಮಾಡಿ ಆದೇಶ ನೀಡಿದೆ.