ಮನೆ ಅಪರಾಧ ಯಾದಗಿರಿ ಪಿಎಸ್​ಐ ಅನುಮಾನಾಸ್ಪದವಾಗಿ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

ಯಾದಗಿರಿ ಪಿಎಸ್​ಐ ಅನುಮಾನಾಸ್ಪದವಾಗಿ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

0

ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.

Join Our Whatsapp Group

ಪಿಎಸ್​ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು (ಆ.03) ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ ​​ಗಾಗಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್​ ಅವರನ್ನು ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಗೀತಾ ಅವರ ಬಳಿ ದೂರು ನೀಡಿದ್ದಾರೆ.

ಯಾದಗಿರಿ ಕಾಂಗ್ರೆಸ್​​ ಶಾಸಕ ಚೆನ್ನಾರೆಡ್ಡಿಗೆ ದುಡ್ಡಿನ ಆಸೆ ಹೆಚ್ಚಾಗಿದೆ. ಯಾದಗಿರಿ ಠಾಣೆಯಿಂದ ಅವಧಿ ಪೂರ್ವ ವರ್ಗಾವಣೆ ಮಾಡಿದ್ದಾರೆ. ಅವಧಿ ಪೂರ್ವ ವರ್ಗಾವಣೆಯಿಂದ ಪಿಎಸ್​ಐ ಪರಶುರಾಮ ನೊಂದಿದ್ದರು. ಏಳು ತಿಂಗಳ ಅವಧಿಯಲ್ಲಿ ಶಾಸಕರು ಬೇರೆಯವರಿಗೆ ಪೋಸ್ಟಿಂಗ್ ನೀಡಿದ್ದಾರೆ. ವರ್ಗಾವಣೆ ಮಾಡುತ್ತಿರುವುದು ಸಿಎಂ, ಗೃಹಸಚಿವರ ಗಮನಕ್ಕೆ ಬರಲಿಲ್ವಾ? ಎಂದು ಮೃತ ಪಿಎಸ್​ಐ ಪರಶುರಾಮ ಮಾವ ವೆಂಕಟಸ್ವಾಮಿ ಗಂಭೀರ ಆರೋಪ ಮಾಡಿದರು.

ಪೋಸ್ಟಿಂಗ್ ​​​ಗಾಗಿ ನನ್ನ ಅಳಿಯನಿಗೆ ಕಾಂಗ್ರೆಸ್ ಶಾಸಕರು ಹಣ ಕೇಳಿದರು. ಹೆಚ್ಚು ಹಣ ಕೊಟ್ಟವರಿಗೆ ಪೋಸ್ಟಿಂಗ್ ಕೊಡಿಸುವ ಕೆಲಸ ಮಾಡಿದ್ದಾರೆ. ಅವರಿಗಿಂತ ಪರಶುರಾಮ ಹಣ ಜಾಸ್ತಿ ಕೊಟ್ಟಿದ್ದರೆ ಪೋಸ್ಟಿಂಗ್ ಆಗುತ್ತಿತ್ತು. ಯಾದಗಿರಿ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕಿಡಿ ಕಾರಿದರು.

ತಪ್ಪಿತಸ್ಥ ಎಂಎಲ್​ಎ ಚನ್ನಾರೆಡ್ಡಿ ಪಾಟೀಲ್​ರನ್ನು ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್​ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದರು. ಯಾದಗಿರಿ ಶಾಸಕ ಹಾಗೂ ಶಾಸಕರ ಪುತ್ರ ದುಡ್ಡಿಗಾಗಿ ಕಿರುಕುಳ ನೀಡುತ್ತಿದ್ದರು. 30 ರಿಂದ 40 ಲಕ್ಷ ದುಡ್ಡು ಕೇಳಿದ್ದಾರೆ. ಪೊಲೀಸರು ಸಹ ಶಾಸಕರ ಬೆಂಬಲವಾಗಿದ್ದಾರೆ.