ಮನೆ ರಾಜಕೀಯ ಡಿ ಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: ಹೆಚ್​ ಡಿ ಕುಮಾರಸ್ವಾಮಿ

ಡಿ ಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: ಹೆಚ್​ ಡಿ ಕುಮಾರಸ್ವಾಮಿ

0

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ಗೊಡ್ಡು ಬೆದರಿಕೆಗಳಿಗೆಲ್ಲ ಬಗ್ಗುವುದಿಲ್ಲ. ನನ್ನ ಬಗ್ಗೆ ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸವಾಲು ಹಾಕಿದರು.

Join Our Whatsapp Group

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಚನ್ನಪಟ್ಟಣ ತಾಲೂಕಿನ ಕೆಂಗಲ್​ನಲ್ಲಿ   ಅವರು ಹೇಳಿಕೆ ನೀಡಿದರು.

ನನ್ನ ಬಗ್ಗೆ ಏನು ಬಿಚ್ಚಿಡುತ್ತಾರೋ ಬಿಚ್ಚಿಡಲಿ. ಅಲ್ಲಿ ಯಾದಗಿರಿಯಲ್ಲಿ ಪಿಎಸ್​ಐ ಪತ್ನಿ ಕಣ್ಣೀರು ಇಡುತ್ತಿದ್ದಾಳೆ. ಮೃತ ಪಿಎಸ್​ಐ ಪತ್ನಿಗೆ ನ್ಯಾಯಕೊಡಿಸಲು ಈ ಸರ್ಕಾರಕ್ಕೆ ಆಗಿಲ್ಲ. ಮೊದಲು ಈ ಸರ್ಕಾರ ಆಕೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದರು.

ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾಗಿದ್ದು ಡಿಕೆ ಶಿವಕುಮಾರ್. ತಪ್ಪು ಮಾಡಿಕೊಂಡು ಪ್ರಾಯಶ್ಚಿತ ಮಾಡಿಕೊಳ್ಳಲ್ಲ ಎಂದು ಭಡ ಮಾತು ಆಡುತ್ತಿದ್ದಾರೆ. ಡಿಕೆ ಶಿವಕುಮಾರ್ ಮಾತಿಗೆ ಯಾರೂ ಗೌರವ ಕೊಡುತ್ತಿಲ್ಲ. ಅವರ ಈಗಿನ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ. ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡಿಕೊಂಡು ಕೂತಿದ್ದಾರೆ. ಮಾತನಾಡಲು ಶಕ್ತಿ ಇಲ್ಲದೆ ಹುಚ್ಚರಂತೆ ಪದ ಬಳಕೆ ಮಾಡಿಕೊಂಡು ಹೋಗುತ್ತಿದ್ದಾರೆ. ನನ್ನ ಹತ್ತಿರ ಇರುವ ದಾಖಲೆಗಳನ್ನು ತೆಗೆದರೆ ಈ ವ್ಯಕ್ತಿ ಮಾಡಿರುವ ಅವ್ಯವಹಾರದ ಸಂಪುಟವನ್ನೇ ಮಾಡಬಹುದು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ

ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಇದು ಪತನವಾಗುವ ಸಮಯ ಹತ್ತಿರವಾಗಿದೆ ಎಂದು ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ಪತನದ ಸುಳಿವು ಕೊಟ್ಟಿದ್ದಾರೆ. ಅಧಿಕಾರ ಮಾಡಲು ನಿಮಗೆ (ಕಾಂಗ್ರೆಸ್​​ನವರಿಗೆ) ಯೋಗ್ಯತೆ ಇದೆಯಾ? ಯಡಿಯೂರಪ್ಪರನ್ನ ನಾನು ಜೈಲಿಗೆ ಕಳುಹಿಸಿಲ್ಲ, ಅವತ್ತಿನ ಸಂದರ್ಭದಲ್ಲಿ ವಿಚಾರ ಹಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.