ದೆಹಲಿ: 2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿ ಖರೀದಿಗೆ ಸಂಬಂಧಪಟ್ಟ ಮೊತ್ತ ಪಾವತಿ ಮಾಡಲಾಗಿದೆ.
ಸುಮಾರು ರೂ.346.50 ಕೋಟಿ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ. ಈ ಬಗ್ಗೆ ಖುದ್ದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.
2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದಿಂದಾಗಿ 2024 ಆಗಸ್ಟ್.05ರವರೆಗೆ ಸುಮಾರು ರೂ.346.50 ಕೋಟಿ ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ. ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.
ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಅಂದಾಜು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ 8ರಷ್ಟು ಮಾತ್ರ). ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ. ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಸೋಮಣ್ಣ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.