ಮನೆ ರಾಜಕೀಯ ಮೂಡಾ ಹಗರಣ: ಸಿಎಂ ಅವರಿಗೆ ಮೂರು ಪ್ರಶ್ನೆ ಕೇಳಿದ ಆರ್ ಅಶೋಕ

ಮೂಡಾ ಹಗರಣ: ಸಿಎಂ ಅವರಿಗೆ ಮೂರು ಪ್ರಶ್ನೆ ಕೇಳಿದ ಆರ್ ಅಶೋಕ

0

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೆಲವು ಪ್ರಶ್ನೆಗಳಿಗೆ ಉತ್ತರಗಳನ್ನು ನೀರಿಕ್ಷೆ ಮಾಡುತ್ತಿದ್ದಾರೆ. ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಕೇಳಿದ್ದಾರೆ.

Join Our Whatsapp Group

1. 2013ರ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇಖ ಮಾಡದೆ ತಪ್ಪು ಮಾಹಿತಿ ನೀಡುತ್ತೀರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ ₹25 ಲಕ್ಷ ಎಂದು ನಮೂದಿಸಿದ್ದೀರಿ. 5 ವರ್ಷಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋದಯವಾಯಿತು?

2. ಈಗ ಹಗರಣ ಬೆಳಕಿಗೆ ಬಂದಮೇಲೆ ₹63 ಕೋಟಿ ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ ₹25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ ₹63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ @RahulGandhi ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವ ಯೋಜನೆಯ ಭಾಗವಾ?

3. 50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಘಿಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಕೆಲಸ ಮಾಡುತ್ತಿತ್ತು? ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಸಿದ್ದರಾಮಯ್ಯ ಎಂದು ಅಶೋಕ್‌ ಕೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.