ಮನೆ ಸ್ಥಳೀಯ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕುಂದುಕೊರತೆಗಳ ಬಗ್ಗೆ ಪ್ರಧಾನ ಜಿಲ್ಲಾ ಮತ್ತು...

ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕುಂದುಕೊರತೆಗಳ ಬಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಭೇಟಿ, ಪರಿಶೀಲನೆ

0

ಮೈಸೂರು:   ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ಹಾಗೂ ಅಂಗನವಾಡಿ ಕೇಂದ್ರಗಳ ಮೂಲ ಸೌಕರ್ಯದ ರಾಜ್ಯ ಸಮಿತಿಯ ಅಧ್ಯಕ್ಷರಾದ ವಿಶ್ರಾಂತ ನ್ಯಾಯಾಮೂರ್ತಿಗಳು, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ರವರ ನಿರ್ದೇಶನದಂತೆ  ಇಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಅವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ಕಂಡು ಕಳವಳ ವ್ಯಕ್ತಪಡಿಸಿದರು.

Join Our Whatsapp Group

        ಮೈಸೂರು ನಗರದಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಸಮುದಾಯ ಭವನ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಂಗನವಾಡಿ ಕೇಂದ್ರದಲ್ಲಿ ಶುದ್ಧ ಗಾಳಿ, ಬೆಳಕು, ಕುಡಿಯುವ ನೀರಿನ ಕೊರತೆ ಇರುತ್ತದೆ. ಅಲ್ಲದೆ ಕಟ್ಟಡಗಳು ಶಿಥಿಲ ಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುತ್ತದೆ. ಇನ್ನು ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಹೆಗ್ಗಣಗಳು ಬಿಲಾ ತೋಡಿ ಕಟ್ಟಡದ ನೆಲಹಾಸು ಹಾಳಾಗಿರುವುದು, ಇದರಿಂದ ಅಹಾರ ಸಂರಕ್ಷಣೆಗೆ ತೊಡಕುಂಟಾಗಿರುವುದು ಕಂಡು ಬಂದಿರುತ್ತದೆ. ಹಾಗೂ ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

        ಮುಂದುವರೆದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ತಯಾರಿಸುವ ಆಹಾರದಲ್ಲಿ ಪೋಶಕಾಂಶದ ಕೊರತೆ, ಮಕ್ಕಳಿಗೆ ತಯಾರಿಸುವ ಲಡ್ಡು ಹಾಗೂ ಸಾಂಬಾರು ಮಾಡಲು ಉಪಯೋಗಿಸುವ ಬೇಳೆ, ಕಾಳುಗಳು ಅವಧಿ ಮುಕ್ತಾಯವಾಗಿದ್ದ (date Expired) ಆಹಾರ ಪದಾರ್ಥಗಳನ್ನು ಇರುವುದನ್ನು ಕಂಡು ನ್ಯಾಯಾಧೀಶರು ಕಳವಳವನ್ನು ವ್ಯಕ್ತಪಡಿಸಿದ್ದರು. ಸದರಿ ಆಹಾರ ಪದಾರ್ಥಗಳನ್ನು ತಕ್ಷಣ ವಾಪಸ್ಸು ಕಳುಹಿಸುವಂತೆ ಹಾಗೂ ಉತ್ತಮ ಅಹಾರ ಪದಾರ್ಥಗಳು ಪಡೆಯುವಂತೆ ನಿರ್ದೇಶಿಸಿದರು.

        ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಮೇಲ್ವಿಚಾರಕರಿಗೆ ಅಂಗನವಾಡಿ ಕೇಂದ್ರಗಳನ್ನು ಹೇಗೆ ನಿಭಾಹಿಸಬೇಕು ಮತ್ತು ಸರ್ಕಾರದ ಆಶಾಯ, ಉದ್ದೇಶಗಳನ್ನು ಮನವರಿಕೆ ಮಾಡಿಕೊಟ್ಟು, ಮೂಲ ಸೌಕರ್ಯಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ಹಾಗೆಯೇ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರ, ಶೂಶ್ರೂಷಕರ, ಪೊಲೀಸ್ ಠಾಣೆಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಅಧಿಕಾರಿಗಳ, ಮೇಲ್ವಿಚಾರಕರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆಗಳನ್ನು  ಪ್ರಕಟಿಸುವಂತೆ ಸೂಚಿಸಿದರು.