ಮನೆ ದೇಶ ಜಪಾನ್ ನಿಂದ ದೆಹಲಿಗೆ ವಾಪಸ್ಸಾದ ಬೆನ್ನಲ್ಲೆ  ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ

ಜಪಾನ್ ನಿಂದ ದೆಹಲಿಗೆ ವಾಪಸ್ಸಾದ ಬೆನ್ನಲ್ಲೆ  ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ

0

ನವದೆಹಲಿ(New Delhi): ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ಜಪಾನ್ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ವಾಪಸ್ಸಾಗಿದ್ದು, ದೆಹಲಿಗೆ ವಾಪಸ್ಸಾಗುತ್ತಿದ್ದಂತೆಯೇ ಸಚಿವ ಸಂಪುಟ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಎರಡು ದಿನಗಳ ಜಪಾನ್ ಪ್ರವಾಸದ ಭಾಗವಾಗಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಇಂದು ಪಾಲಂನ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದರು.

ನಂತರ ದೆಹಲಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಎಸ್ ಜೈಶಂಕರ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಸ್ಮೃತಿ ಇರಾನಿ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.