ಮನೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವ : ಬಿಜೆಪಿ ಟೀಕೆ

0

ಬೆಂಗಳೂರು(Bengaluru) : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಣಕ್ಕೆ ಮಹಿಳಾ ಸಬಲೀಕರಣ ಅಂದ್ರೆ ಬೆಳಗಾವಿಯ ಬೇನಾಮಿ ಅಧ್ಯಕ್ಷೆ ಮಾತ್ರ. ಲಕ್ಷ್ಮಿ ಜಪ ಮಾಡುವುದೇ ಮಹಿಳಾ ಸಬಲೀಕರಣವೇ? ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಪರಿಷತ್​ಗೆ ಮಹಿಳಾ ಅಭ್ಯರ್ಥಿ ಆಯ್ಕೆ ಮಾಡದಿರುವ ಕಾಂಗ್ರೆಸ್ ನಡೆಯನ್ನು ಟೀಕಿಸಿ ಟ್ವೀಟ್ ಮಾಡಿರುವ ಬಿಜೆಪಿ, ಉತ್ತರಪ್ರದೇಶ – ಮೈ ಲಡ್ಕಿ ಹೂ, ಮೈ ಲಡ್ ಸಕ್ತಿ ಹೂ. ಆದರೆ, ಕರ್ನಾಟಕದಲ್ಲಿ ಮಹಿಳಾ ಸಬಲೀಕರಣ ಬಗ್ಗೆ ಉದ್ದುದ್ದ ಭಾಷಣ ಮಾಡುವ ಕಾಂಗ್ರೆಸ್ ನಾಯಕರು ಒಬ್ಬ ಮಹಿಳಾ ಅಭ್ಯರ್ಥಿಯನ್ನು ಪರಿಷತ್ತಿಗೆ ಆಯ್ಕೆ ಮಾಡಿಲ್ಲ. ಮಹಿಳಾ ಸಬಲೀಕರಣ ಬರೀ ಭಾಷಣಕ್ಕೆ ಸೀಮಿತವೇ?, ಧೈರ್ಯಕ್ಕೆ ದುರ್ಗೆ, ಶಕ್ತಿಗೆ ಪಾರ್ವತಿ, ಸಹನೆಗೆ ಸೀತೆ, ವಿದ್ಯೆಗೆ ಸರಸ್ವತಿ ಎಂದು ಸ್ತ್ರೀಯರಿಗೆ ಗೌರವ ಕೊಡುವ ಸಂಸ್ಕೃತಿ ನಮ್ಮದು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವ. ಇದು ಮಹಿಳಾ ಸಬಲೀಕರಣ ವಿಚಾರಕ್ಕೆ ಕಾಂಗ್ರೆಸ್ ಮಾಡುತ್ತಿರುವ ಅವಮಾನವಲ್ಲದೆ ಮತ್ತೇನು? ಎಂದು ವಾಗ್ದಾಳಿ ನಡೆಸಿದೆ.

ಆದರೆ, ಕರ್ನಾಟಕ ಕಾಂಗ್ರೆಸ್​ನಲ್ಲಿ ಮಹಿಳೆಯರಿಗೆ ಬೆಲೆಯೇ ಇಲ್ಲ. ಇವರಿಗೆ ಮಹಿಳೆಯರು ನೆನಪಾಗುವುದು ಚುನಾವಣೆಯ ಸಂದರ್ಭದಲ್ಲಿ ಅಥವಾ ಪ್ರತಿಭಟನೆ ಮಾಡುವಾಗ ಮಾತ್ರ. ಕಾರ್ಯಾಧ್ಯಕ್ಷರಲ್ಲೂ ಮಹಿಳೆಯರಿಗೆ ಸ್ಥಾನವಿಲ್ಲ, ಪರಿಷತ್ ಚುನಾವಣೆಗೂ ಮಹಿಳಾ ಅಭ್ಯರ್ಥಿ ಇಲ್ಲ. ಮಹಿಳಾ ಸಬಲೀಕರಣ ಬರೀ ಬೂಟಾಟಿಕೆಯೇ? ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೊಂದಿರುವ ಮಹಿಳಾ ನಾಯಕಿಯೇ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಮಹಿಳಾ ಕಾರ್ಯಕರ್ತರ ಪಾಡೇನು? ಎಂದು ಟೀಕಿಸಿದೆ.