ಯಾದಗಿರಿ: ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಗುರುವಾರ (ಆಗಸ್ಟ್.08) ರಂದು ಪೊಲೀಸ್ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್ ಹೆಡ್ ಪತ್ತೆಯಾಗಿದೆ. ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಲೆಟರ್ ಹೆಡ್ ನೀಡಿದ್ದರು.
ಈ ಲೆಟರ್ ಹೆಡ್ ಸಿಐಡಿ ಅಧಿಕಾರಿಗಳು ಮಹಜರು ವೇಳೆ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಪೋಸ್ಟಿಂಗ್ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಪಿಎಸ್ಐ ಪರಶುರಾಮ ಹಣ ಹೊಂದಿಸುತ್ತಿದ್ದರು. ವಸತಿ ಗೃಹದಲ್ಲಿ ಪೋಸ್ಟಿಂಗ್ಗಾಗಿ ಕೂಡಿಟ್ಟ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರಶುರಾಮ ಅವರಿಗೆ ಸೇರಿದ ನಾಲ್ಕು ಬ್ಯಾಂಕ್ ಖಾತೆಯಲ್ಲಿನ ಹಣದ ಮಾಹಿತಿಯನ್ನೂ ಸಹ ಸಿಐಡಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಜೊತೆಗೆ ಇಲಾಖಾ ರಿವಾಲ್ವರ್ (ಬಂದೂಕು), ಸಿಮ್ಕಾರ್ಡ್, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ. ಪರಶುರಾಮ ಮೃತಪಟ್ಟ ಜಾಗದಲ್ಲಿ ಮುಗಿನಿಂದ ಬಾಯಿಂದ ಬಂದ ರಕ್ತದ ಮಾದರಿ ಸಹ ಸಂಗ್ರಹಿಸಲಾಗಿದೆ.
ಮೃತ ಪಿಎಸ್ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಪೋಸ್ಟಿಂಗ್ ಆಗದೆ ಇರುವ ಬಗ್ಗೆ, ಸ್ನೇಹಿತರು ಮತ್ತು ಕಟುಂಬಸ್ಥರ ಮುಂದೆ ಪೋಸ್ಟಿಂಗ್ ಹಣ ಕೇಳಿರುವ ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದಾರೆ. ಎಲ್ಲ ಸಂಭಾಷಣೆಗಳ ಆಡಿಯೋ ಮೊಬೈಲ್ನಲ್ಲಿವೆ.
ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಆಗಿದ್ದ ಪರಶುರಾಮ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಪಂಪಾಗೌಡ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈಗಾಗಲೆ ಶಾಸಕ ಚೆನ್ನಾರೆಡ್ಡಿ ವಿರುದ್ಧ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಪಿಎಸ್ಐ ಪರಶುರಾಮ ಸಾವು ಬಳಿಕ ಶಾಸಕ ಚೆನ್ನಾರೆಡ್ಡಿ ನಾಪತ್ತೆಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.