ಮನೆ ರಾಜ್ಯ ಬೆಂಗಳೂರಿನಲ್ಲಿ ತಡರಾತ್ರಿ ಮಳೆ: ಬಿಟಿಎಂ, ಸಿಟಿ ಮಾರ್ಕೆಟ್​ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ತಡರಾತ್ರಿ ಮಳೆ: ಬಿಟಿಎಂ, ಸಿಟಿ ಮಾರ್ಕೆಟ್​ ರಸ್ತೆಗಳು ಜಲಾವೃತ

0

ಬೆಂಗಳೂರು: ನಗರದಲ್ಲಿ ತಡರಾತ್ರಿ ಮಳೆ ಅಬ್ಬರಿಸಿದ್ದು, ಪರಿಣಾಮ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Join Our Whatsapp Group

ಬನಶಂಕರಿ, ಬಿಟಿಎಂ ಲೇಔಟ್, ಬಸವನಗುಡಿ ಕೆ.ಆರ್.ಮಾರ್ಕೆಟ್, ಜೆ.ಸಿ.ರಸ್ತೆ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಯಶವಂತಪುರ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಭಾನುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗ್ಗೆವರೆಗೂ ಸುರಿದಿದೆ.

ನಿರಂತರ ಮಳೆಯಿಂದಾಗಿ ಬಿಟಿಎಂ ಲೇಔಟ್ ​ನ 2ನೇ ಹಂತದ ಬಹುತೇಕ ಏರಿಯಾಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಸಿಲ್ಕ್​ ಬೋರ್ಡ್​, ಎಲೆಕ್ಟ್ರಾನಿಕ್​ ಸಿಟಿ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ. ಇತ್ತ ಅಂಡರ್​​ ಪಾಸ್​ನ ಲ್ಲಿ ನೀರು ನಿಂತ ಪರಿಣಾಮ ಆಂಬ್ಯುಲೆನ್ಸ್​​ ಕೆಟ್ಟು ನಿಂತ ಘಟನೆ ಓಕಳಿಪುರಂನಲ್ಲಿ ನಡೆದಿದೆ.

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ‌ಮುಂಭಾಗ ರಸ್ತೆ ‌ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಕೆ.ಆರ್. ಮಾರ್ಕೆಟ್ ಸುತ್ತಮುತ್ತಲಿನ ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇಪೇಟೆ, ಕಾಟನ್ ಪೇಟೆ ಸಂಪರ್ಕಿಸುವ ರಸ್ತೆಗಳು ನೀರು ತುಂಬಿಕೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಳೆ ಸೃಷ್ಟಿಸಿರುವ ಅವಾಂತರದಿಂದಾಗಿ ಬೆಳಗ್ಗೆ ಕೆಲಸಕ್ಕೆ ತೆರಳುವವರೂ ಸಹ ಕಿರಿಕಿರಿ ಅನುಭವಿಸುವಂತಾಗಿದ್ದು, ಇಂದೂ ಸಹ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.