ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಾಮರಾಜ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ವಸತಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸುತ್ತಿರುವ ವಸತಿ ಯೋಜನೆಗಳಿಗೆ ಅನ್ವಯವಾಗುವಂತೆ ಪತಿ ಪಟ್ಟಣ ನಗರ ಪಂಚಾಯಿತಿ/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆಗಳಿಗೆ ಆಶ್ರಯ ಸಮಿತಿಯನ್ನು ರಚಿಸಲು ಅವಕಾಶ ಇರುತ್ತದೆ. ಈ ಆಶ್ರಯ ಸಮಿತಿಗೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ, ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ನಾಲ್ಕು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಸರ್ಕಾರಕ್ಕೆ ಅವಕಾಶ ಇರುತ್ತದೆ. ಅದರಂತೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಾಮರಾಜ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ.
ಪರಿಶಿಷ್ಟ ಜಾತಿ/ಪಂಗಡದ ಎಸ್.ಮಂಜುನಾತ್, ಹಿಂದುಳಿದ ವರ್ಗ ಮಹಿಳಾ ಕೋಟಾದಿಂದ ರಾಣಿ ಕೆ, ಅಲ್ಪಸಂಖ್ಯಾತ ವರ್ಗದಿಂದ ಮೊಹಮದ್ ಇಬ್ರಾಹಿಂ ಎ.ಎ. ಹಾಗೂ ಸಾಮಾನ್ಯ ವರ್ಗದಿಂದ ಅನಂತನಾರಾಯಣ ಆರ್ ಎಲ್ ಅವರನ್ನು ನೇಮಕ ಮಾಡಲಾಗಿದೆ.