ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೋ ಅಲರ್ಟ್, ಆ.15ರಂದು ಆರೆಂಜ್ ಅಲರ್ಟ್ ಇರಲಿದೆ. ಹಾಗೆಯೇ ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡ: ದಕ್ಷಿಣ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ. ಕರಾವಳಿ, ಉತ್ತರ ಕರ್ನಾಟಕ, ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕಡಿಮೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಇಂದು ಬೆಳಗಿನಜಾವ ಮಳೆಯಾಗಿದೆ. ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದರೆ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದ್ದು, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಹೆಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದ್ದರೆ, ಕನಿಷ್ಠ 19.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.