ಮನೆ ಅಪರಾಧ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನ ಬರ್ಬರ ಹತ್ಯೆ

ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನ ಬರ್ಬರ ಹತ್ಯೆ

0

ಕಲಬುರಗಿ(Kalburgi): ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಯಾದ ಯುವಕ. ವಿಜಯ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದನೆಂಬ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಆತನ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನು ರೈಲ್ವೆ ತಡೆಗೋಡೆಯ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದ ಒದ್ದಾಡಿದ ಯುವಕ ಸ್ಥಳದಲ್ಲೇ ಅಸುನೀಗಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ ವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರ ಶೋಧ ಕಾರ್ಯ ಆರಂಭಿಸಿದ್ದಾರೆ.