ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.
ಶ್ರೀನಿವಾಸ್ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.
ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.