ಮನೆ ರಾಷ್ಟ್ರೀಯ ಅಗ್ನಿ ಕ್ಷಿಪಣಿ ಪಿತಾಮಹ ಡಾ. ರಾಮ್ ನಾರಾಯಣ್ ಅಗರ್ವಾಲ್ ನಿಧನ

ಅಗ್ನಿ ಕ್ಷಿಪಣಿ ಪಿತಾಮಹ ಡಾ. ರಾಮ್ ನಾರಾಯಣ್ ಅಗರ್ವಾಲ್ ನಿಧನ

0

ಹೈದರಾಬಾದ್ :​ದೇಶದ ಖ್ಯಾತ ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ಹೈದರಾಬಾದ್ ​ನಲ್ಲಿ ನಿಧನರಾಗಿದ್ದಾರೆ.

Join Our Whatsapp Group

ಅವರು ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್​ ಕ್ಷಿಪಣಿ ತಯಾರಿಕೆಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ರಾಮ್ ನಾರಾಯಣ್ ಅವರನ್ನು ಅಗ್ನಿ ಕ್ಷಿಪಣಿ ಪಿತಾಮಹ ಎಂದೇ ಕರೆಯುತ್ತಿದ್ದರು. ಪದ್ಮಭೂಷಣ ಪುರಸ್ಕೃತ ಆರ್​ಎನ್ ಅಗರ್ವಾಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಡಿಆರ್​ಡಿಓ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಅತ್ಯುತ್ತಮ ವೈಮಾನಿಕ ವಿಜ್ಞಾನಿ ಅವರ ನಿದನದಿಂದ ತುಂಬಾ ದುಃಖವಾಗಿದೆ. ಭಾರತದ ದೀರ್ಘ ವ್ಯಾಪ್ತಿಯ ಕ್ಷಿಪಣಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

DRDO ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಕ್ಷಿಪಣಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಅಗ್ನಿ 1- 700-800 ಕಿ.ಮೀ, ಅಗ್ನಿ 2 – 2000 ಕಿ.ಮೀಗಿಂತ ಹೆಚ್ಚು, ಅಗ್ನಿ 3 – 2500 ಕಿ.ಮೀಗಿಂತ ಹೆಚ್ಚು, ಅಗ್ನಿ 4 – 3500 ಕಿ.ಮೀಗಿಂತ ಹೆಚ್ಚು ಮತ್ತು ಅಗ್ನಿ 5 – 5000 ಕಿ.ಮೀಗಿಂತ ಹೆಚ್ಚು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ.

ಡಾ. ಅಗರ್ವಾಲ್ ಅವರು ಎಎಸ್​ಎಲ್​ ನಿರ್ದೇಶಕರಾಗಿ ನಿವೃತ್ತರಾದರು ಮತ್ತು ಎರಡು ದಶಕಗಳ ಕಾಲ ದೇಶದ ಮಹತ್ವಾಕಾಂಕ್ಷೆಯ ಅಗ್ನಿ ಕ್ಷಿಪಣಿ ಕಾರ್ಯಕ್ರಮವನ್ನು ಮನ್ನಡೆಸಿದರು. ವಿಜ್ಞಾನಿಯಾಗಿ ತಮ್ಮ ವೃತ್ತಿಜೀವನದಲ್ಲಿ, ಡಾ ಅಗರ್ವಾಲ್ ಡಾ ಅರುಣಾಚಲಂ ಮತ್ತು ಡಾ ಎಪಿಜೆ ಅಬ್ದುಲ್ ಕಲಾಂ ಅವರಂತಹ ವಿಜ್ಞಾನಿಗಳೊಂದಿಗೆ ಕೆಲಸ ಮಾಡಿದ್ದಾರೆ.