ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಶಾಕ್ ನೀಡಿದ್ದು, ಗುರುವಾರ ಆರೋಪ ಪಟ್ಟಿ ದಾಖಲಿಸಿದೆ.
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಹೊರಗೆ ಇದ್ದಾರೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.