ಮನೆ ರಾಜ್ಯ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು:  ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

Join Our Whatsapp Group

ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲರು ಅನುಮತಿ ನೀಡಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಮುಂದಿನ ಕಾನೂನು ಹೋರಾಟದ ಬಗ್ಗೆ ಸಿದ್ದರಾಮಯ್ಯ  ಸಮಾಲೋಚನೆ ನಡೆಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಸರ್ಕಾರಿ ನಿವಾಸಕ್ಕೆ ಬಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಎಚ್.ಕೆ ಪಾಟೀಲ, ಗೃಹ ಸಚಿವ ಪರಮೇಶ್ವರ, ಎನ್. ಚಲುವರಾಯಸ್ವಾಮಿ, ಕೃಷ್ಣ ಭೈರೇಗೌಡ ಭೈರತಿ ಸುರೇಶ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದಾರೆ.

ಇತ್ತ ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಅವರನ್ನು ರಾಜಭವನಕ್ಕೆ ಬರುವಂತೆ ಆಹ್ವಾನಿಸಲಾಗಿದೆ.

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ, ಮುಖ್ಯಮಂತ್ರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದರು.