ಮನೆ ಅಪರಾಧ ಬೆಂಗಳೂರು: ಶಾಲಾ ಬಸ್ ಢಿಕ್ಕಿಯಾಗಿ ಬಾಲಕಿ ಸಾವು

ಬೆಂಗಳೂರು: ಶಾಲಾ ಬಸ್ ಢಿಕ್ಕಿಯಾಗಿ ಬಾಲಕಿ ಸಾವು

0

ಬೆಂಗಳೂರು(Bengaluru): ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುರುವಾರ ಬೆಂಗಳೂರು ನಗರದ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಈ ಅಪಘಾತ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಹಾರೋಹಳ್ಳಿ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ತ್ರಿಬಲ್‌ ರೈಡ್ ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಬಸ್ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕೀರ್ತನಾ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.