ಮನೆ Uncategorized ಕಾರಿನಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ, ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಮೃತ! 

ಕಾರಿನಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ, ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಮೃತ! 

0

ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರಿಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.

Join Our Whatsapp Group

ಕಾರಿನಲ್ಲಿದ್ದ ಕುಟುಂಬದವರು ಶ್ರಾವಣ ಮಾಸದ ಹಿನ್ನೆಲೆ ಕಲ್ಲಾಪೂರ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಹೊರಟಿದ್ದರು. ಇಳಕಲ್​ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಮೂವರ ಶವಗಳು ಸಿಲುಕಿಕೊಂಡಿದ್ದರೆ, ಬಾಲಕಿಯ ಶವ ಕಾರಿನ ಹೊರಗೆ ಕಂಡುಬಂದಿದೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಮತ್ತು ಮಗ ವಿಜಯ(12) ಎಂದು ಗುರುತಿಸಲಾಗಿದೆ. ನರಗುಂದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.