ಮನೆ ಅಪರಾಧ ಹಿಂಸೆಗೆ ತಿರುಗಿದ ಕಾಂಗ್ರೆಸ್‌ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ

ಹಿಂಸೆಗೆ ತಿರುಗಿದ ಕಾಂಗ್ರೆಸ್‌ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ

0

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.

Join Our Whatsapp Group

ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.

ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತರು ಇದೇ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಪ್ರಸಂಗ ನಡೆಯಿತು. ಮಹಾನಗರ ಪಾಲಿಕೆ ಎದುರು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಇಟ್ಟು ಪ್ರತಿಭಟನೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು. ಈ ನಾಯಕರ ಎದುರಲ್ಲೇ ಅಹಿತಕರ ಘಟನೆ ನಡೆದಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಂದೋಬಸ್ತ್‌ ಮಾಡಿದ್ದಾರೆ.