ಮನೆ ಆರೋಗ್ಯ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ, 7 ವರ್ಷ ಜೈಲು ಶಿಕ್ಷೆ: ಸಚಿವ...

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ, 7 ವರ್ಷ ಜೈಲು ಶಿಕ್ಷೆ: ಸಚಿವ ದಿನೇಶ್ ಗುಂಡೂರಾವ್ ಆದೇಶ

0

ಬೆಂಗಳೂರು : ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ ೩ ವರ್ಷದಿಂದ ಗರಿಷ್ಠ ೭ ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ೨೫,೦೦೦ ರೂ.ನಿಂದ ೨ ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Join Our Whatsapp Group

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ, ಬೆದರಿಕೆಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಈ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕಟ್ಟು ನಿಟ್ಟಿನ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ವೈದ್ಯರ ಮೇಲಿನ ಹಲ್ಲೆಗೆ ೩ ವರ್ಷದಿಂದ ಗರಿಷ್ಠ ೭ ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ೨೫,೦೦೦ ರೂ.ನಿಂದ ೨ ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ದೈಹಿಕ ದೌರ್ಜನ್ಯದ ಜೊತೆಗೆ ಸಾಮಾಜಿಕ ಜಾಲತಾಣದ ಮೂಲಕ ಅವಹೇಳನ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಹೇಳಿದ್ದಾರೆ.