ಮನೆ ಸುದ್ದಿ ಜಾಲ ಕೊಳ್ಳೇಗಾಲ: ಜೂಜಾಡುತ್ತಿದ್ದ ನಾಲ್ವರ ಬಂಧನ

ಕೊಳ್ಳೇಗಾಲ: ಜೂಜಾಡುತ್ತಿದ್ದ ನಾಲ್ವರ ಬಂಧನ

0

ಕೊಳ್ಳೇಗಾಲ (kollegala)-ಅಕ್ರಮವಾಗಿ ಜೂಜಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ 2900 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ನಾಲ್ವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಮಗೆರೆಯ ರಾಜು, ಅನಿಲ್, ನಿಂಗರಾಜು ಹಾಗೂ ಮಾಂಬಳ್ಳಿಯ ನಟರಾಜು ಬಂಧಿತ ಆರೋಪಿಗಳು.
ಇವರುಗಳು ಗ್ರಾಮದ ಹೊರವಲಯದಲ್ಲಿರುವ ದಲಿತರ ಸಶ್ಮಾನದ ಬಳಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಠಾಣಾ ಜಾಮೀನು ಮೇಲೆ ಆರೋಪಿಗಳನ್ನು ಬಿಡುಗಡೆಗೊಳಿಸಿದರು.