ಮನೆ ರಾಜಕೀಯ ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಟಕ್ಕರ್​: ಬಿಜೆಪಿ-ಜೆಡಿಎಸ್​ ನಾಯಕರಿಗೆ ಎದುರಾಯ್ತು ಸಂಕಷ್ಟ

ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಟಕ್ಕರ್​: ಬಿಜೆಪಿ-ಜೆಡಿಎಸ್​ ನಾಯಕರಿಗೆ ಎದುರಾಯ್ತು ಸಂಕಷ್ಟ

0

ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತು ನೀಡಿರುವುದು ರಾಜ್ಯ ಸರ್ಕಾರ ಹಾಗೂ ರಾಜಭವನ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದ್ದು, ರಾಜ್ಯಪಾಲರಿಗೆ ಟಕ್ಕರ್​ ಕೊಡಲು ಕೈ ನಾಯಕರು ಸಮರೋಪಾದಿಯಲ್ಲಿ ಪ್ಲ್ಯಾನ್​ ರೂಪಿಸುತ್ತಿದ್ದು,ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

Join Our Whatsapp Group


ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್​.ಕೆ. ಪಾಟೀಲ್​, ಆಗಸ್ಟ್ 1ರಂದು ಸಂಪುಟ ಸಭೆ ನಡೆದಿತ್ತು. ಅಂದು ಡಿಸಿಎಂ ಸಭೆ ನಡೆಸಲು ಸಿಎಂ ಸೂಚಿಸಿದ್ದರು. ಆ ಸಭೆಯಲ್ಲಿ ಆರ್ಟಿಕಲ್ 163ರಡಿ ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧರಿಸಿದ್ದೆವು. ಸಂಪುಟ ಸಭೆಯು 90. ಪುಟಗಳ ನಿರ್ಣಯವನ್ನು ಈಗ ದೃಢೀಕರಿಸಲಾಯಿತು.
ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ
ಎಚ್.ಡಿ.ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ಎಚ್​.ಡಿ. ಕುಮಾರಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತ ಎಸ್ಐಟಿಗೆ ಸ್ಪಷ್ಟೀಕರಣ ಕೋರಿ ಕೇಳಿದ್ದರು. ಇದಕ್ಕೆ ಅಗತ್ಯವಿರುವ ಸ್ಪಷ್ಟೀಕರಣವನ್ನು ಪತ್ರದ ಎಸ್ಐಟಿ ನೀಡಿದೆ. ಇದೀಗ ಸಂಪುಟದಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಾಸಿಕ್ಯೂಷನ್ ಬಗ್ಗೆ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲು ರಾಜ್ಯಪಾಲರಿಗೆ ಆರ್ಟಿಕಲ್ 163 ಅನ್ವಯ ನೆರವು ಹಾಗೂ ಸಲಹೆ ನೀಡುವ ಸಂಪುಟ ಅಧಿಕಾರವನ್ನು ಬಳಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬಾಕಿ ಇರುವ ಪ್ರಕರಣದಲ್ಲಿ ಅನುಮೋದನೆ ಕೊಡಬೇಕು, ಪೂರ್ವಾನುಮತಿ ಕೊಡಬೇಕು ಎಂಬುದು ನಮ್ಮ ಒತ್ತಾಯ. ನಮ್ಮ‌ ಪ್ರಕಾರ ನಾವು ನೀಡಿರುವ ಸಲಹೆ‌ ಒಪ್ಪಬೇಕಾಗುತ್ತದೆ. ಅವರ ವಿವೇಚನಾಧಿಕಾರ ಸೀಮಿತ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರಕರಣದಲ್ಲಿ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದರು. ಈ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದರು. ಆದರೆ ಈ ನಾಲ್ಕು ಪ್ರಕರಣದಲ್ಲಿ ತನಿಖೆ ಆಗಿದೆ ಹಾಗೂ ಎರಡು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದರೂ ಏನೂ ಕ್ರಮ ಆಗಿಲ್ಲ. ಹೀಗಿರುವಾಗ ಕ್ಯಾಬಿನೆಟ್ ಈ ಸಲಹೆ ಕೊಡುವುದು ಸೂಕ್ತ ಎಂದರು. ಜನ ಸಂಘಟನೆಗಳು ಕೂಡಾ ಈ ಆಗ್ರಹ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಲ್ಲಿ ಯಾವುದೇ ದ್ವೇಷದ ರಾಜಕಾರಣ ಇಲ್ಲ ಎಂದು ಕಾನೂನು ಸಚಿವ
ಎಚ್​.ಕೆ. ಪಾಟೀಲ್​ ತಿಳಿಸಿದ್ದಾರೆ.