ಮನೆ ಸುದ್ದಿ ಜಾಲ ಅಕ್ರಮ ಮದ್ಯ ಮಾರಾಟ: ಮಹಿಳೆ ಬಂಧನ

ಅಕ್ರಮ ಮದ್ಯ ಮಾರಾಟ: ಮಹಿಳೆ ಬಂಧನ

0

ಕೊಳ್ಳೇಗಾಲ (Kollegala)-ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಬಾಣೂರು ಗ್ರಾಮದ ಸಾಕಮ್ಮ ಬಂಧಿತ ಆರೋಪಿ. ಈಕೆ ಸಂಗ್ರಹಿಸಿಟ್ಟಿದ್ದ 90 ಎಂ.ಎಲ್.ನ 17 ಪೌಚ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈಕೆ ಗ್ರಾಮದ ಬಸವೇಶ್ವರ ಬೀದಿಯ ಅಂಗಡಿಯು ಮುಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪಿಎಸ್ಐ ಮಂಜುನಾಥ್ ಸಿಬ್ಬಂದಿಗಳೊಡನೆ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಮೇಲೆ ಮುಂದಿನ ಕ್ರಮ ಕೈಗೊಂಡಿದ್ದಾರೆ.