ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಸಂಜಯ್ ರಾಯ್ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಸಂಜಯ್ನನ್ನು ಭಾರಿ ಪೊಲೀಸ್ ಭದ್ರತೆಯಲ್ಲಿ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಕ್ಕೆ ಕರೆತರಲಾಯಿತು. ರಾಯ್ ಅವರ ಸಿಬಿಐ ಕಸ್ಟಡಿ ಶುಕ್ರವಾರ ಅಂತ್ಯಗೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ.
ಪ್ರತ್ಯೇಕವಾಗಿ, ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಸಿಬಿಐಗೆ ಅನುಮತಿ ನೀಡಿತು. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಆರೋಪಿ ಸಂಜಯ್ ರಾಯ್ ನದ್ದು ಕ್ರೂರ ಪ್ರಾಣಿಯ ಮನಸ್ಥಿತಿ, ಆತನಿಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಆತ ನಿತ್ಯವೂ ತನ್ನ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಣೆ ಮಾಡುತ್ತಿರುತ್ತಿದ್ದ, ಪ್ರಾಣಿಯ ಪ್ರವೃತ್ತಿಯನ್ನು ಹೊಂದಿದ್ದ, ಆತನಿಗೆ ತಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸಿಬಿಐ ಆಗಸ್ಟ್ 18ರಂದು ಸಂಜಯ್ ರಾಯ್ ಮನಸ್ಥಿತಿಯನ್ನು ತಿಳಿದುಕೊಳ್ಳಲು ಸಿಎಫ್ಎಸ್ಎಲ್ ತಜ್ಞರಿಗೆ ಹೇಳಿದ್ದರು. ಆಗಸ್ಟ್ 9 ರಂದು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯರ ಶವ ಪತ್ತೆಯಾದ ಮರುದಿನ ಬಂಧಿಸಲಾಗಿತ್ತು.